Thursday, June 4, 2026
Homeಕರಾವಳಿಉಡುಪಿಉಡುಪಿಯಲ್ಲಿ ವರುಣನ ರೌದ್ರ ನರ್ತನ, ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆ

ಉಡುಪಿಯಲ್ಲಿ ವರುಣನ ರೌದ್ರ ನರ್ತನ, ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆ

- Advertisement -
- Advertisement -

ಉಡುಪಿ : ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕರಾವಳಿ ಜನ ಬೇಸತ್ತು ಹೋಗಿದ್ದಾರೆ. ವರುಣ ನಿರಂತರವಾಗಿ ಆರ್ಭಟಿಸುತ್ತಿದ್ದು ಮನೆಯಿಂದ ಹೊರ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೃಷ್ಣ ನಗರಿ ಉಡುಪಿಯಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಸಂಕ ಬೈಲಕೆರೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹದಲ್ಲಿ ಸಿಲುಕಿ ಹಾಕಿಕೊಂಡವರನ್ನು ಇದೀಗ ರಕ್ಷಣೆ ಮಾಡಲಾಗಿದೆ. ಕ್ರೇನ್ ನ ಸಹಾಯದ ಮೂಲಕ ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಿ, ಜನರನ್ನು ರಕ್ಷಿಸಲಾಗಿದೆ. ಪ್ರವಾಹದಲ್ಲಿ ಸಿಲುಕಿದವರಲ್ಲಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿ ಇದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!