ಮಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ, ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಮಂಗಳೂರಿನಲ್ಲಿ ಪರಿಶೀಲನಾ ಕಾರ್ಯಾಚರಣೆ ನಡೆದಿದೆ.
ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಎಂಎಫ್‌ಸಿ ರೆಸ್ಟೋರೆಂಟ್ ವಿರುದ್ಧ ಕ್ಯೂಆರ್ ಕೋಡ್ ಮೂಲಕ ಬಂದಿರುವ ದೂರಿನ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ಸಂದರ್ಭದಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸಿ, ಅಗತ್ಯವಿರುವ ಮಾದರಿಗಳನ್ನು ಸಂಗ್ರಹಿಸಿ ಮುಂದಿನ ಕಾನೂನು ಕ್ರಮಕ್ಕಾಗಿ ಕಳುಹಿಸಿದ್ದಾರೆ.
ಸಾರ್ವಜನಿಕರು ಆಹಾರದ ಗುಣಮಟ್ಟ, ಸ್ವಚ್ಛತೆ ಅಥವಾ ಆಹಾರ ಸುರಕ್ಷತೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ದೂರು ಸಲ್ಲಿಸುವ ವ್ಯವಸ್ಥೆಯನ್ನು ಆಹಾರ ಸು ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹೊಸದಾಗಿ ಪರಿಚಯಿಸಿದೆ.


