Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಮಳೆ ನೀರು ಚರಂಡಿ ಮತ್ತು ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು: ಮಳೆ ನೀರು ಚರಂಡಿ ಮತ್ತು ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

- Advertisement -
- Advertisement -

ಮಂಗಳೂರು: ಕದ್ರಿ ಗ್ರೌಂಡ್ ನಿಂದ ಕದ್ರಿ ಕಂಬಳ ರಸ್ತೆಯವರೆಗೆ ಮಳೆನೀರು ಚರಂಡಿ ಹಾಗೂ ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್.ಐ.ಆರ್. ನಿಧಿಯಿಂದ ಎರಡು ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಮಳೆಗಾಲದಲ್ಲಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದ ಬಗ್ಗೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶಕೀಲ ಕಾವಾ, ಭರತ್ ಕುಮಾರ್ ಸೂಟರ್ ಪೇಟೆ ಮತ್ತು ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!