Friday, June 5, 2026
Homeತಾಜಾ ಸುದ್ದಿಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್: ಅಲಿಬಾಗ್ ನ್ಯಾಯಾಲಯದ ಮೊರೆ ಹೋದ ಗೋಸ್ವಾಮಿ

ಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್: ಅಲಿಬಾಗ್ ನ್ಯಾಯಾಲಯದ ಮೊರೆ ಹೋದ ಗೋಸ್ವಾಮಿ

- Advertisement -
- Advertisement -

ಮುಂಬೈ: 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​​ ಆತ್ಮಹತ್ಯೆ ಮಾಡ್ಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ಅರ್ನಬ್ ಗೋಸ್ವಾಮಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್‌ ನ್ಯಾಯಾಲಯ ಆದೇಶ ನೀಡಿತ್ತು. ಜಾಮೀನು ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್​ಗೆ ಅರ್ನಬ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್​ ಎಸ್​ ಶಿಂಧೆ ನೇತೃತ್ವದ ನ್ಯಾಯಪೀಠವು ಅರ್ಜಿಯನ್ನು ತಿರಸ್ಕರಿಸಿದ್ದು,

ಕೆಳಹಂತದ ನ್ಯಾಯಾಲಯದಲ್ಲಿ ಬೇಲ್​ ಅರ್ಜಿ ಸಲ್ಲಿಸಲು ಸಲಹೆ ನೀಡಿದೆ. ಹೀಗಾಗಿ ಅಲಿಬಾಗ್ ಸೆಷನ್ಸ್​ ನ್ಯಾಯಾಲಯದಲ್ಲಿ ಗೋಸ್ವಾಮಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!