Monday, September 9, 2024
Homeಉದ್ಯಮಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

spot_img
- Advertisement -
- Advertisement -

ಮಂಗಳೂರು: ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅನುಮತಿ ನೀಡಿದ್ದಾರೆ.

ಇಲೆಕ್ಟ್ರಿಕ್ ಸೇರಿದಂತೆ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದು, ಈ ನಿಟ್ಟಿನಲ್ಲಿ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ, ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ  ಸ್ಟಿಕ್ಕರ್ / ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ ದಿನಾಂಕ 24-11-2022ರ ಅಧಿಸೂಚನೆ ಮತ್ತು 23-01-2023ರ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಆರ್.ಟಿ.ಓ. ಅಧಿಕಾರಿಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶಿಸಲಾಗಿದೆ. ಅಷ್ಟೇ ಅಲ್ಲದೇ ಮಂಗಳೂರು ನಗರದಲ್ಲಿ ಇದಕ್ಕೆ ಸಂಬಂಧಿಸಿದಂತೆ ಅವಶ್ಯಕವಿರುವಂತಹ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

ಇನ್ನು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರೆ ಪ್ರದೇಶಗಳಿಗೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಮೋಟಾರು ವಾಹನ ಕಾಯಿದೆಯಂತೆ ಪಾರ್ಕಿಂಗ್ ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಅಧಿಕಾರವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!