ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಷಡ್ಯಂತ್ರವೇ ನಡೆದಿದ್ದು, ಈ ಷಡ್ಯಂತ್ರಕ್ಕೆ ವಿದೇಶಿ ಹಣವನ್ನ ಬಳಕೆ ಮಾಡಲಾಗಿದೆ ಎಂದು ಶಾಸಕ ಭರತ್ ಶೆಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.
ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಎಂಬ ಬಗ್ಗೆ ನಮಗೆ ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ. ಈ ಬಗ್ಗೆ ಇಡಿ ಅಥವಾ ಎನ್‌ಐಎ ತನಿಖೆಯಾದರೆ ಸತ್ಯ ವಿಚಾರ ಬಯಲಾಗುತ್ತದೆ. ಈ ಕೃತ್ಯದಲ್ಲಿ ಯಾರೆಲ್ಲಾ ಖಾತೆಗಳಿಗೆ ಯಾರಿಗೆ ಎಲ್ಲಿಂದ ಹಣ ಎಷ್ಟು ಬಂದಿದೆ ಎಂದು ಗೊತ್ತಾಗಲಿದೆ. ಈಗಾಗಲೇ ಷಡ್ಯಂತ್ರ ನಡೆದಿದೆ ಎಂಬ ಬಗ್ಗೆ ನಾವೂ ಹೇಳುತ್ತಿದ್ದೇವೆ. ಕಾಂಗ್ರೆಸ್‌ನವರೂ ಹೇಳುತ್ತಿದ್ದಾರೆ. ಹಾಗಾಗಿ ಇಡಿ ಅಥವಾ ಎನ್‌ಐಎ ತನಿಖೆಗೆ ಕೊಡಲಿ. ಇನ್ನು ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ. ಈ ಬಗ್ಗೆ ಹೇಳುವವರೆಲ್ಲಾ ಎಸ್‌ಐಟಿಗೆ ಆ ದಾಖಲೆಗಳನ್ನು ಕೊಡಲಿ. ಎಸ್‌ಐಟಿ ಅವರಿಗೆ ಸೌಜನ್ಯ ಕೇಸ್ ತನಿಖೆ ಮಾಡಲು ಅವಕಾಶ ಇದ್ದರೆ, ತನಿಖೆ ಮಾಡಲಿ ಎಂದು ಹೇಳಿದರು.


