Wednesday, June 24, 2026
Homeಕರಾವಳಿಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಹಣ ಬಳಕೆ; ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು; ಪುಣ್ಯ ಕ್ಷೇತ್ರ...

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಹಣ ಬಳಕೆ; ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು; ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್‌ ಮನವಿ

- Advertisement -
- Advertisement -

ಮಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೆಲ ಅನಧಿಕೃತ ಮಾಧ್ಯಮಗಳು, ಯೂಟ್ಯೂಬರ್‌ಗಳಿಂದ ಕ್ಷೇತ್ರದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದ್ದು, ಇಂತಹ ಷಡ್ಯಂತ್ರ ರೂಪಿಸಲು ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂಬ ಅನುಮಾನವಿದೆ. ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್‌ ಅವರು ಆ.07 ಗುರುವಾರದಂದು ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ಧರ್ಮಸ್ಥಳದ ಬಗ್ಗೆ ಅನೇಕ ರೀತಿಯ ಸುಳ್ಳ ಆರೋಪಗಳು ಕೇಳಿ ಬರುತ್ತಿವೆ. ಮುಸುಕುಧಾರಿ ವ್ಯಕ್ತಿಯು ಯಾರ ಮೇಲೆ ಆರೋಪ ಮಾಡಿದ್ದಾನೆ ಎಂದು ಇನ್ನೂ ದೃಢಪಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಸುದ್ದಿ ಮಾಧ್ಯಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಶ್ರೀ ಮಂಜುನಾಥ ಸ್ವಾಮಿಗಳ ಫೋಟೊ ಬಳಸುವುದು ತಪ್ಪು. ಧರ್ಮಸ್ಥಳ ಕ್ಷೇತ್ರದ ಈ ಷಡ್ಯಂತ್ರದ ವಿರುದ್ಧ ಇದೇ ತಿಂಗಳು ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಜಾಗರಣಾ ಸಮಾವೇಶ ನಡೆಸುತ್ತೇವೆ ಎಂದು ತಿಳಿಸಿದರು.

ಕ್ಷೇತ್ರದ ಬಗ್ಗೆ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕೆಲ ಅನಧಿಕೃತ ಮಾಧ್ಯಮಗಳು, ಯೂಟ್ಯೂಬರ್‌ಗಳಿಂದ ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಸಂತ್‌ ಗಿಳಿಯಾರ್ ಆಗ್ರಹಿಸಿದರು.

- Advertisement -

Latest News

error: Content is protected !!