Wednesday, June 24, 2026
Homeಚಿಕ್ಕಮಗಳೂರುಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ದಾಳಿ; ವ್ಯಕ್ತಿ ಸಾವು; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ದಾಳಿ; ವ್ಯಕ್ತಿ ಸಾವು; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

- Advertisement -
- Advertisement -

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಶನಿವಾರ ಸಂಭವಿಸಿದೆ.

ಮೃತ ದುರ್ದೈವಿ ಉಮೇಶ್ (56) ಎಂದು ತಿಳಿದು ಬಂದಿದೆ.

ಘಟನೆಯ ವಿವರ: ಹೊಲದಲ್ಲಿ ಉಮೇಶ್ ಅವರು ಕೆಲಸು ಮಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಗೆ ಗ್ರಾಮಕ್ಕೆ ಆನೆ ಬಂದಿರುವ ವಿಚಾರ ಮಾಹಿತಿ ನೀಡಿದರೂ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ.

ಘಟನಾ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!