- Advertisement -
![]()
- Advertisement -
ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಬೋರ್ಗಲ್ಲುಗುಡ್ಡೆ ಎಂಬಲ್ಲಿ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಆಹಾರವನ್ನು ಅರಸಿ ನಾಡಿಗೆ ಬಂದಿದ್ದ ವೇಳೆ ಚಿರತೆ ಬಾವಿಎ ಬಿದ್ದಿರಬಹುದು ಎನ್ನಲಾಗಿದೆ. ಇನ್ನು ಬಾವಿಯಲ್ಲಿ ಚಿರತೆಯನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ರುತ್ರನ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀಧರ್ ಮಾರ್ಗದರ್ಶನದಂತೆ ಚಂದ್ರಕಾಂತ್ ಕರುಣಾಕರ್, ಗಸ್ತು ಅರಣ್ಯಪಾಲಕ ಸುರೇಶ್ ಮತ್ತು ಸ್ಥಳೀಯರ ಸಹಕಾರದೊಂದಿಗೆ ಬಾವಿಗೆ ಬಿದ್ದ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು.
- Advertisement -


