Thursday, June 4, 2026
Homeಕರಾವಳಿಬೆಳ್ತಂಗಡಿಯಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ಅರಣ್ಯ ವೀಕ್ಷಕ ನೇಣಿಗೆ ಶರಣು

ಬೆಳ್ತಂಗಡಿಯಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ಅರಣ್ಯ ವೀಕ್ಷಕ ನೇಣಿಗೆ ಶರಣು

- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆಯಲ್ಲಿ ನಡೆದಿದೆ.  ಬಾಲಕೃಷ್ಣ ಗೌಡ (40) ಆತ್ಮಹತ್ಯೆ ಮಾಡಿಕೊಂಡ  ದುರ್ದೈವಿ.

ಬಾಲಕೃಷ್ಣ ಗೌಡರವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು. ಇಂದು ಬೆಳಿಗ್ಗೆ ಮನೆಯ ಪಕ್ಕದ ಗುಡ್ಡ ಪ್ರದೇಶದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ  ತನಿಖೆಯಿಂದ ಮಾಹಿತಿ ತಿಳಿದುಬರಬೇಕಾಗಿದೆ.ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!