Thursday, June 25, 2026
Homeತಾಜಾ ಸುದ್ದಿಪಶ್ಚಿಮ ಘಟ್ಟದಲ್ಲಿ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ; ಪ್ರಸ್ತಾವನೆ ಸಲ್ಲಿಸಲು ಅರಣ್ಯ ಇಲಾಖೆ ಎಸಿಎಸ್ ಗೆ...

ಪಶ್ಚಿಮ ಘಟ್ಟದಲ್ಲಿ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ; ಪ್ರಸ್ತಾವನೆ ಸಲ್ಲಿಸಲು ಅರಣ್ಯ ಇಲಾಖೆ ಎಸಿಎಸ್ ಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

- Advertisement -
- Advertisement -

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ ಸಲ್ಲಿಸಲು ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳಿಗೆ ತಾತ್ಕಾಲಿಕವಾಗಿ ತಡೆ ಹಿಡಿಯುವುದು ಸೂಕ್ತ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.

ಇದೇ ವೇಳೆ, ಕಸ್ತೂರಿ ರಂಗನ್ ವರದಿ ಕುರಿತು ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ಸಚಿವ ಖಂಡ್ರೆ ಮಾಹಿತಿ ನೀಡಿದ್ದಾರೆ.

ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳಿಗೆ ತಾತ್ಕಾಲಿಕ ತಡೆ ನೀಡುವಂತೆ ಸೂಚಿಸಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಢಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಅನುಮತಿ ಸೂಕ್ತವೆಂದು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಕೂಡಲೇ ವಿವಿಧ ಇಲಾಖೆ ಸಮನ್ವಯದೊಂದಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಎಸಿಎಸ್ ಗೆ ಸಚಿವರು ಸೂಚನೆ ನೀಡಿದ್ದಾರೆ.

ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮ ಘಟ್ಟದ ಹಲವೆಡೆ ಭೂ ಕುಸಿತ ಹಿನ್ನೆಲೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!