Wednesday, June 3, 2026
Homeಕೊಡಗುಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

ಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

- Advertisement -
- Advertisement -

ಕುಶಾಲನಗರ: ಇಲ್ಲಿನ ಬೆಂಡೆಬೆಟ್ಟ ಗ್ರಾಮದ ಮುಖ್ಯ ರಸ್ತೆಯ ಬದಿಯಲ್ಲಿ ಹಾಡಹಗಲೇ ಕಾಡಾನೆಯೊಂದು ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಒಂಟಿ ಸಲಗ ಬೆಂಡೆಬೆಟ್ಟ ಗ್ರಾಮದಲ್ಲಿ ಮುಂಜಾನೆ ವೇಳೆ ಮುಖ್ಯ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ತತ್‌ಕ್ಷಣವೇ ಅರಣ್ಯ ಇಲಾಖೆಯ ಗಮನಕ್ಕೆ ತಂದರು.

ಸ್ಥಳಕ್ಕೆ ಆಗಮಿಸಿದ ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅತ್ತೂರು ಉಪವಲಯ ಅರಣ್ಯಾಧಿಕಾರಿ ಉಮೇಶ್‌ ನೇತೃತ್ವದ ಸಿಬ್ಬಂದಿ ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಂಡರು.

- Advertisement -

Latest News

error: Content is protected !!