Thursday, June 4, 2026
Homeಕರಾವಳಿಉಡುಪಿಬೈಂದೂರಿನ ಬಿಜೆಪಿ ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆ?

ಬೈಂದೂರಿನ ಬಿಜೆಪಿ ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆ?

- Advertisement -
- Advertisement -

ಕುಂದಾಪುರ: ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ಈ ಬೆಳವಣಿಗೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಬೆಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಲೋಕಸಭೆಯ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿಯೂ ಪಕ್ಷಾಂತರ ಪರ್ವ ಆರಂಭವಾಗಿದೆ. ಕಳೆದ ಬಾರಿ ಬೈಂದೂರು ಶಾಸಕರಾಗಿದ್ದ ಬಿ.ಎಂ. ಸುಕುಮಾರ ಶೆಟ್ಟರು ಬಿಜೆಪಿ ತೊರೆದು, ಕಾಂಗ್ರೆಸ್ ಸೇರುವುದು ಖಚಿತವಾಗಿದೆ.

ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಪಕ್ಷದ ಸೇರ್ಪಡೆ ವಿಷಯದ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಮುಖಂಡ ರಾದ ಆಯನೂರು ಮಂಜುನಾಥ್, ಸುಧೀರ್ ಕುಮಾರ್ ಜತೆಗಿದ್ದರು.

ಬಿಜೆಪಿಯಿಂದ ದೂರವಿದ್ದರು ಬಿಜೆಪಿಯಿಂದ ಎರಡು ಬಾರಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಈ ಪೈಕಿ 2013 ರಲ್ಲಿ ಕಾಂಗ್ರೆಸ್‌ನ ಗೋಪಾಲ ಪೂಜಾರಿ ವಿರುದ್ಧ ಸೋತರೆ, 2018 ರಲ್ಲಿ ಅವರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟು ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಆಗಿನಿಂದಲೂ ಸಾರ್ವಜನಿಕ ಸಭೆ, ಸಮಾರಂಭಗಳಿಂದ ದೂರವಿದ್ದರು. ಆಗಲೇ ಕಾಂಗ್ರೆಸ್ ಸೇರ್ಪಡೆ ವಿಚಾರ ಕೇಳಿ ಬಂದಿತ್ತು. ಆದರೆ ಈಗ ಖಚಿತಗೊಂಡಿದೆ.

- Advertisement -

Latest News

error: Content is protected !!