Friday, June 5, 2026
Homeತಾಜಾ ಸುದ್ದಿಎನ್.ಡಿ.ಎ ನಾಯಕ, ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ ವಿಧಿವಶ

ಎನ್.ಡಿ.ಎ ನಾಯಕ, ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ ವಿಧಿವಶ

- Advertisement -
- Advertisement -

ಭುವನೇಶ್ವರ್: ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ (79) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಭಾನುವಾರ ಅರ್ಜುನ್ ಚರಣ್ ಸೇಥಿ ಆಸ್ಪತ್ರೆಗೆ ದಾಖಲಾಗಿದ್ದರು. ಭದ್ರಾಕ್ ಲೋಕಸಭಾ ಕ್ಷೇತ್ರದಿಂದ 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.2000-2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಎನ್ ಡಿ ಎ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದರು.

1941ರ ಸೆಪ್ಟೆಂಬರ್ 18ರಂದು ಜನಿಸಿದ ಅವರು, ಭದ್ರಕ್ ಕ್ಷೇತ್ರದಿಂದ 1971ರಲ್ಲಿ ಮೊದಲ ಬಾರಿ ಲೋಕಸಭೆಗೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಅಯ್ಕೆಯಾಗಿದ್ದರು. 1980ರಲ್ಲೂ ಮತ್ತೆ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾದರು. 1991ರಲ್ಲಿ ಜನತಾದಳ, 1998, 1999, 2004, 2009ರಲ್ಲಿ ಬಿಜೆಡಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಒಡಿಶಾ ವಿಧಾನಸಭೆಗೂ ಆಯ್ಕೆಯಾಗಿದ್ದರು.

ಇನ್ನು ಹಿರಿಯ ನಾಯಕನ ನಿಧನಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮೀರ್ ಮೊಹಾಂತಿ, ಮಾಜಿ ಕೇಂದ್ರ ಸಚಿವ ಶ್ರೀಕಾಂತ್ ಜೆನಾ ಮತ್ತಿತರರು ಸೇಥಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

- Advertisement -

Latest News

error: Content is protected !!