Friday, June 5, 2026
Homeತಾಜಾ ಸುದ್ದಿಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಪ್ತ ಸಹಾಯಕನಿಗೂ ಕೊರೋನಾ ಪಾಸಿಟಿವ್

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಪ್ತ ಸಹಾಯಕನಿಗೂ ಕೊರೋನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಆಪ್ತ ಸಹಾಯಕನಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಕೊರೋನಾ ಸೋಂಕಿನ ಭೀತಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರಿಗೂ ಎದುರಾಗಿತ್ತು.

ಆದ್ರೇ ಹೆಚ್ ಡಿ ಕುಮಾರಸ್ವಾಮಿಯವರೂ ಕೂಡ ಆಪ್ತ ಸಹಾಯಕನಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದು, ಅವರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ತಿಳಿದು ಬಂದಿದೆ.

ಈ ಮೂಲಕ ಕೊರೋನಾ ಸೋಂಕಿನ ಭೀತಿಯಲ್ಲಿದ್ದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ನೆಮ್ಮದಿಯ ನಿಟ್ಟುಸಿರುವ ಬಿಡುವಂತೆ ಆಗಿದೆ.

- Advertisement -

Latest News

error: Content is protected !!