Monday, June 8, 2026
Homeತಾಜಾ ಸುದ್ದಿಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ; ನಾಳೆ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ...

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ; ನಾಳೆ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಬೆಂಗಳೂರು; ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ.  ನಾಳೆ(ಡಿ. ೧೧) ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

 ಕಳೆದ ಕೆಲವು ತಿಂಗಳುಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ ಅವರು ನಿನ್ನೆ ತಡರಾತ್ರಿ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ನಾ ಳೆ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

- Advertisement -

Latest News

error: Content is protected !!