Thursday, June 4, 2026
Homeತಾಜಾ ಸುದ್ದಿಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಮಾಜಿ ಸಿಎಂ ಯಡಿಯೂರಪ್ಪ

ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಮಾಜಿ ಸಿಎಂ ಯಡಿಯೂರಪ್ಪ

- Advertisement -
- Advertisement -

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರನ್ನು ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ರಾಜಕೀಯವೇ ಬೇರೆ, ಖಾಸಗಿ ಜೀವನವೇ ಬೇರೆಯಾಗಿ ಪರಿಗಣಿಸಿರುವ ಉಭಯ ನಾಯಕರು ಪರಸ್ಪರ ಕೆಲಕಾಲ ಮಾತುಕತೆ ನಡೆಸಿದರು.

ಕಳೆದ ದಿನವಷ್ಟೇ ಪ್ರತಿಪಕ್ಷ ನಾಯಕ ಹಾಗೂ ಒಂದು ಕಾಲದಲ್ಲಿ ಗೌಡರ ಒಡನಾಡಿಯಾಗಿದ್ದ ಸಿದ್ದರಾಮಯ್ಯ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು. ಇಂದು ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

- Advertisement -

Latest News

error: Content is protected !!