Thursday, June 4, 2026
Homeಪ್ರಮುಖ-ಸುದ್ದಿಪತ್ನಿಯಿಂದಲೇ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ

ಪತ್ನಿಯಿಂದಲೇ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ

- Advertisement -
- Advertisement -

ಬೆಂಗಳೂರು : ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎನ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ.

 ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಅವರ ಪತ್ನಿ ಪತಿಯ ಹತ್ಯೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆನಡೆಸುತ್ತಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಸದ್ಯ ಶವವನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Latest News

error: Content is protected !!