Wednesday, June 24, 2026
Homeತಾಜಾ ಸುದ್ದಿಅಮೆರಿಕದ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಬಿಜೆಪಿಗೆ ಸೇರ್ಪಡೆ

ಅಮೆರಿಕದ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಅಮೆರಿಕದಲ್ಲಿನ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಅವರು ಮಂಗಳವಾರದಂದು ಬಿಜೆಪಿಗೆ ಸೇರ್ಪಡೆಯಾಗಿದ್ದು, ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸಂಧು ಅವರು ಬಿಜೆಪಿಗೆ ಸೇರಿದ್ದಾರೆ.

ತರಣ್‌ಜಿತ್ ಅವರು ಅಮೆರಿಕದಲ್ಲಿನ ಭಾರತದ 28ನೇ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಸಂಧು ಅವರು ಪಂಜಾಬ್‌ನ ಅಮೃತಸರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

Latest News

error: Content is protected !!