Thursday, June 4, 2026
Homeಕ್ರೀಡೆಕ್ರಿಕೆಟ್ ಗೆ ನಿವೃತ್ತಿ ಘೋಷಿಸಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಆರ್‌ಸಿಬಿ ತಂಡದ ಮಾಜಿ ವೇಗಿ

ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಆರ್‌ಸಿಬಿ ತಂಡದ ಮಾಜಿ ವೇಗಿ

- Advertisement -
- Advertisement -

ಕೋಲ್ಕತ: ಇದೇ ತಿಂಗಳ ಪ್ರಾರಂಭದಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದ ಭಾರತೀಯ ಕ್ರಿಕೆಟ್ ತಂಡ ಮತ್ತು ಆರ್‌ಸಿಬಿಯ ಮಾಜಿ ವೇಗದ ಬೌಲರ್ ಅಶೋಕ್ ದಿಂಡಾ ನಿನ್ನೆ ಕೋಲ್ಕತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸೇರಿದರು.

ಪಶ್ಚಿಮ ಬಂಗಾಳದವರಾದ 36 ವರ್ಷದ ಅಶೋಕ್ ದಿಂಡಾ ಭಾರತ ಪರ 13 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದು, ಕ್ರಮವಾಗಿ 12 ಮತ್ತು 17 ವಿಕೆಟ್ ಕಬಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 116 ಪಂದ್ಯಗಳಲ್ಲಿ 420 ವಿಕೆಟ್ ಕಬಳಿಸಿದ್ದಾರೆ.

ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್‌ರೈಡರ್ಸ್, ಪುಣೆ ವಾರಿಯರ್ಸ್, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳಲ್ಲಿಯೂ ದಿಂಡಾ ಆಡಿದ್ದರು. ಐಪಿಎಲ್‌ನ 78 ಇನ್ನಿಂಗ್ಸ್‌ಗಳಲ್ಲಿ 68 ವಿಕೆಟ್‌ ಪಡೆದಿದ್ದಾರೆ. 18 ರನ್‌ ನೀಡಿ 4 ವಿಕೆಟ್ ಕಬಳಿಸಿರುವುದು ಐಪಿಎಲ್‌ನಲ್ಲಿ ಇವರ ಶ್ರೇಷ್ಠ ಸಾಧನೆಯಾಗಿದೆ.

ಕ್ರಿಕೆಟಿಗ ಮನೋಜ್ ತಿವಾರಿ ಕೊಲ್ಕತ್ತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ ಮರುದಿನವೇ ಅಸೋಕ್ ದಿಂಡಾ ಬಿಜೆಪಿಗೆ ಸೇರಿದ್ದಾರೆ. .

- Advertisement -

Latest News

error: Content is protected !!