Wednesday, June 24, 2026
Homeತಾಜಾ ಸುದ್ದಿತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಐಪಿಎಸ್ ಅಧಿಕಾರಿ...

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ ತಂದೆಯ ಅನಾರೋಗ್ಯ. ಹೀಗಾಗಿ ತಂದೆಯ ಆರೈಕೆ, ಆರೋಗ್ಯ ಕಾಳಜಿ ಪ್ರಮುಖ ಆದ್ಯತೆಯಾಗಿರುವ ಕಾರಣ ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. ಆದ್ದರಿಂದ ನನಗೆ ನೀಡಲಾಗಿದ್ದ 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು, ಅಲ್ಲಿನ ಜವಾಬ್ದಾರಿಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

ಆದರೆ ಅಣ್ಣಾಮಲೈ ರಾಜೀನಾಮೆ ರಾಜಕೀಯ ವಲಯದಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

- Advertisement -

Latest News

error: Content is protected !!