Wednesday, June 24, 2026
Homeತಾಜಾ ಸುದ್ದಿಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ವಿಧಿವಶ

ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ವಿಧಿವಶ

- Advertisement -
- Advertisement -

ರಾಂಚಿ: ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ಅವರು ತಮ್ಮ 81 ವರ್ಷ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.

ಅವರು ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸಗೆಗಾಗಿ ಶಿಬು ಸೊರೇನ್‌ ಅವರನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಕಳೆದ ಒಂದು ತಿಂಗಳಿನಿಂದಲೂ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

ತಂದೆಯ ನಿಧನದ ಮಾಹಿತಿಯನ್ನು ಪುತ್ರ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರೀತಿಯ ದಿಶೋಮ್‌ ಗುರೂಜಿ ನಮ್ಮನ್ನು ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆ ಎಂದು ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!