- Advertisement -
- Advertisement -
ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ
ಸೆಪ್ಟೆಂಬರ್ 20 ರಂದು ಕಾರ್ಕಳ-ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಮಾನಾಥ ರೈ ಅವರು ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಕೊಡಿಯಾಲ್‌ಬೈಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅವರು, ಇಂದು ಡಿಸ್ಚಾರ್ಜ್ ಆಗಿ ಬಂಟ್ವಾಳದ ಕಳ್ಳಿಗೆಯಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದ್ದಾರೆ. ವೈದ್ಯರು ಅವರಿಗೆ ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
- Advertisement -


