Tuesday, June 23, 2026
Homeತಾಜಾ ಸುದ್ದಿಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ  ಹೈಕಮಾಂಡ್ ಬಳಿ ಮನವಿ ಮಾಡಿದ ಮಾಜಿ ಸಚಿವ ಆರ್. ಅಶೋಕ್

ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ  ಹೈಕಮಾಂಡ್ ಬಳಿ ಮನವಿ ಮಾಡಿದ ಮಾಜಿ ಸಚಿವ ಆರ್. ಅಶೋಕ್

- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಆರ್. ಅಶೋಕ್  ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ  ಹೈಕಮಾಂಡ್ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನದ ರೇಸ್‍ನಲ್ಲಿ ನಾನು ಇಲ್ಲ. ಆದರೆ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ನೀಡಿ ಎಂದು ಪಕ್ಷರ ವರಿಷ್ಠರ ಮುಂದೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಆರ್. ಅಶೋಕ್ ಅವರೇ  ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ವಿಪಕ್ಷ ನಾಯಕನ ಆಯ್ಕೆ ಬಗ್ಗೆ ನಿನ್ನೆ ಕೇಂದ್ರ ನಾಯಕರು ನಮ್ಮ ಮಾಹಿತಿ ಪಡೆದು ಹೊಸದಿಲ್ಲಿಗೆ ತೆರಳಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಬಳಿ ಚರ್ಚಿಸಿ ಪ್ರತಿಪಕ್ಷ ನಾಯಕರು ಯಾರು ಎಂದು ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!