- Advertisement -
- Advertisement -
ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್‌ರವರ ಆರೋಗ್ಯದಲ್ಲಿ ಏರುಪೇರು ಆಗಿರುವ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿರುವ 92ರ ಹರೆಯದ ಉರಿಮಜಲು ರಾಮ ಭಟ್ಟರವರು ವಯೋ ಸಹಜ ಅನಾರೋಗ್ಯದಲ್ಲಿದ್ದು, ಕೆಲವು ದಿನಗಳ ಹಿಂದೆ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಚೇತರಿಸಿಕೊಂಡಿದ್ದ ರಾಮ ಭಟ್‌ರವರನ್ನು ಕೊಂಬೆಟ್ಟಿನಲ್ಲಿರುವ ಅವರ ಮನೆಗೆ ಕರೆ ತರಲಾಗಿತ್ತು. ಮಗದೊಮ್ಮೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಇದೀಗ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
- Advertisement -