Friday, May 17, 2024
Homeಕರಾವಳಿ"ಬಿಜೆಪಿಯ ಭೀಷ್ಮ" ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನ

“ಬಿಜೆಪಿಯ ಭೀಷ್ಮ” ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನ

spot_img
- Advertisement -
- Advertisement -

ಪುತ್ತೂರು: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿಯ ಭೀಷ್ಮ ಎಂದೇ ಚಿರಪರಿಚಿತರಗಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ . ರಾಮ ಭಟ್ ( 92 ) ರವರು ಅಲ್ಪಕಾಲದ ಅನಾರೋಗ್ಯದ ಕಾರಣದಿಂದ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ.

ಆರೋಗ್ಯದಲ್ಲಿ ಏರುಪೇರು ಆಗಿರುವ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ತಿಂಗಳುಗಳ ಹಿಂದೆಯಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚೇತರಿಸಿಕೊಂಡಿದ್ದ ರಾಮ ಭಟ್‌ರವರನ್ನು ಕೊಂಬೆಟ್ಟಿನಲ್ಲಿರುವ ಅವರ ಮನೆಗೆ ಕರೆದುಕೊಂಡು ಬರಲಾಗಿತ್ತು.

ಮತ್ತೆ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಂಜೆ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಇವರು 7 ಬಾರಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದದ್ದರು. 1977 ಹಾಗೂ 1983ರಲ್ಲಿ ಗೆದ್ದು ಶಾಸಕರಾಗಿದ್ದರು. 1957 ರಲ್ಲಿ ಮೊದಲ ಬಾರಿ ಜನ ಸಂಘದ ಅಡಿಯಲ್ಲಿ ಚುನಾವಣೆ ಸ್ಪರ್ಧಿಸಿದ್ದರು. ಸ್ವಾಭಿಮಾನಿ ವೇದಿಕೆ ಹುಟ್ಟು ಹಾಕಿದ್ದ ಇವರು ಸ್ವಾಭಿಮಾನಿ ಸೌಹಾರ್ದ ಸಹಕಾರಿ ಸಂಘದ ಹುಟ್ಟಿಗೂ ಕಾರಣರಾಗಿದ್ದರು.

ಜನಸಂಘದ ಪ್ರಭಾವಿ ನಾಯಕರಾಗಿ, ವಕೀಲರಾಗಿ, ಪುತ್ತೂರು ಪುರಸಭೆಯ ಅಧ್ಯಕ್ಷರಾಗಿ, ಕ್ಯಾಂಪೋದ ಅಧ್ಯಕ್ಷರಾಗಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರಿನ ಶಾಸಕರಾಗಿ, ಭಾರತೀಯ ಜನತಾ ಪಾರ್ಟಿಯ ಮುಂಚೂಣಿಯ ಮುಖಂಡರಾಗಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡ ಇವರು ಎಲ್ಲರಿಗೂ ಮಾದರಿಯಾಗಿದ್ದರು.

- Advertisement -
spot_img

Latest News

error: Content is protected !!