- Advertisement -


- Advertisement -
ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಳ್ಳಾರಿ ಮತ್ತು ಚಿತ್ರದುರ್ಗ ಮೂಲದವರು ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ತಮಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನಟಿ ರಮ್ಯಾ ಸೋಮವಾರ ಜು.28 ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ನೀಡಿದ್ದರು. ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಇನ್ನಾ ಗ್ರಾಂ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಟಿ ರಮ್ಯಾ ದೂರು ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ನೀಡಲಾಗಿತ್ತು.
- Advertisement -


