- Advertisement -
- Advertisement -
ಮಂಗಳೂರು; ದ್ವೇಷದ ಭಾಷಣ ಮಾಡಿದ್ದಾರೆ ಎಂದು ಉಪನ್ಯಾಸಕ ಅರುಣ್ ಉಳ್ಳಾಲ್ ಅವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ.
ಈ ಹಿನ್ನೆಲೆ ಉಪನ್ಯಾಸಕ ಅರುಣ್ ಉಳ್ಳಾಲ್ ಅವರ ನಿವಾಸಕ್ಕೆ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ನಳೀನ್ ಕುಮಾರ್ ಕಟೀಲ್ ಪೊಲೀಸ್ ಅಧಿಕಾರಿಗಳು ರಾಜ್ಯ ಸರಕಾರದ ಇಶಾರೆಗೆ ತಕ್ಕಂತೆ ಆಡುತ್ತಿರುವುದು ಖಂಡನೀಯ.ಅರುಣ್ ಉಳ್ಳಾಲ್ ಅವರ ಮನೆಗೆ ಭೇಟಿ ನೀಡಿ ಅವರಲ್ಲಿ ನೈತಿಕ ಸ್ಥೈರ್ಯ ತುಂಬುವ ಕಾರ್ಯ ಮಾಡಲಾಗಿದೆ ಎಂದರು.
ಇನ್ನು ನಳೀನ್ ಕುಮಾರ್ ಕಟೀಲ್ ಭೇಟಿ ವೇಳೆ ಭಾಜಪಾ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಪಕ್ಷದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು
- Advertisement -