- Advertisement -
![]()
- Advertisement -
ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ನಿನ್ನೆ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸೋದನ್ನು ಇಂದಿಗೆ ಕಾಯ್ದಿಸಿರಿಸಲಾಗಿತ್ತು. ಅದರಂತೆ ಈಗ ಶಿಕ್ಷೆ ಪ್ರಕಟವಾಗಿದ್ದು, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಶಿಕ್ಷೆಯ ವಿವರ: ಯಾವ ಸೆಕ್ಷನ್ ಅಡಿ ಎಷ್ಟು ಶಿಕ್ಷೆ, ದಂಡ?
- ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
- 376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
- ಐಪಿಸಿ ಸೆಕ್ಷನ್ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
- ಐಪಿಸಿ ಸೆಕ್ಷನ್ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
- ಐಪಿಸಿ ಸೆಕ್ಷನ್ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
- ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
- ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
- ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ.
- Advertisement -


