- Advertisement -
- Advertisement -
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೇ.31 ರಂದು ಆದೇಶ ನೀಡಿತ್ತು. ಇಂದಿಗೆ ಅವರ ಎಸ್ ಐಟಿ ಕಸ್ಟಟಿ ಅಂತ್ಯವಾದ ಹಿನ್ನೆಲೆ ನ್ಯಾಯಾಲಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಜೂನ್.10ರವರೆಗೆ ಮತ್ತಷ್ಟು ತನಿಖೆಗಾಗಿ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಮಾಜಿ ಸಂಸದ ಪ್ರಜಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದರು.ಮೇ 30 ರ ತಡ ರಾತ್ರಿ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಆಗಮಿಸಿದ್ದಂತ ಅವರನ್ನು ಎಸ್‌ಐಟಿ ಅಧಿಕಾರಿಗಳು ಏರ್ ಪೋರ್ಟ್ ನಲ್ಲೇ ಬಂಧಿಸಿದ್ದರು.
.
ಇಂದು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎಸ್ ಐಟಿ ಅಧಿಕಾರಿಗಳು ಕೋರಿದ್ದರು. ಈ ಹಿನ್ನಲೆಯಲ್ಲಿ ಜೂನ್.10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
- Advertisement -