Saturday, July 18, 2026
Homeಪ್ರಮುಖ-ಸುದ್ದಿಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಕುಟುಂಬಸ್ಥರ ಭೇಟಿ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಕುಟುಂಬಸ್ಥರ ಭೇಟಿ

- Advertisement -
- Advertisement -

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆ ಮತ್ತು ಎದೆನೋವಿನಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ (85) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಮೂರು ದಿನಗಳಿಂದ ಅನಾರೋಗ್ಯ ಉಲ್ಬಣಿಸಿದ್ದರಿಂದ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ದೇವೇಗೌಡರು, ಸಂಸದ ಡಾ.ಸಿ.ಎನ್. ಮಂಜುನಾಥ್ ಸೇರಿದಂತೆ ಕುಟುಂಬಸ್ಥರು ಹಾಗೂ ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇನ್ನು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಶುಕ್ರವಾರ ಆಸ್ಪತ್ರೆಗೆ ಧಾವಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, “ತಮ್ಮ ತಾಯಿ ಚನ್ನಮ್ಮ ಅವರು ನಂಬಿರುವ ರಾಜರಾಜೇಶ್ವರಿಯೇ ಈ ಬಾರಿಯೂ ಅವರನ್ನು ಕಾಪಾಡುತ್ತಾಳೆ; ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದು, ಈ ಹಿಂದೆ 25 ವರ್ಷಗಳ ಹಿಂದೆ ನಡೆದ ಆ್ಯಸಿಡ್ ದಾಳಿಯಂತಹ ಕಠಿಣ ಪರಿಸ್ಥಿತಿಯಲ್ಲೂ ದೇವರೇ ಅವರನ್ನು ಬದುಕಿಸಿದ್ದನು,” ಎಂದು ಭಾವುಕರಾಗಿ ನುಡಿದಿದ್ದಾರೆ.

- Advertisement -

Latest News

error: Content is protected !!