Wednesday, June 3, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ

- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಅನಾರೋಗ್ಯದ ಹಿನ್ನೆಲೆಯಲ್ಲಿ ನೆನ್ನೆಯಷ್ಟೆ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.

ಸೋಮವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಚ್.ಡಿ.ದೇವೇಗೌಡ ಅವರು ಸದ್ಯಕ್ಕೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಂಜೆ ವೇಳೆಗೆ ಅವರನ್ನು ತೀವ್ರ ನಿಗಾಘಟಕದ ಬದಲಿಗೆ ವಾರ್ಡ್‌ಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಸಾಮಾನ್ಯ ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಸೋಂಕುಂಟಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಕಳೆದ ಎರಡು ದಿನಗಳಿಂದ ಚಿಕಿತ್ಸೆ ಮುಂದುವರೆಸಲಾಗಿತ್ತು. ಗೌಡರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!