Wednesday, June 3, 2026
Homeಕ್ರೀಡೆಪುಣೆ: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಮಾಜಿ ಶೂಟರ್ ಪೌರ್ಣಿಮಾ ನಿಧನ

ಪುಣೆ: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಮಾಜಿ ಶೂಟರ್ ಪೌರ್ಣಿಮಾ ನಿಧನ

- Advertisement -
- Advertisement -

ಪುಣೆ: ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಭಾರತ ಇತ್ತೀಚಿನ ದಿನಗಳಲ್ಲಿ ಅನೇಕ ಖ್ಯಾತನಾಮರನ್ನು ಕಳೆದುಕೊಂಡಿದೆ. ಸೋಮವಾರ ಈ ಸಾಲಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ. ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೌರ್ಣಿಮಾ ಜಾನಾನೆ ಇಂದು, ತಮ್ಮ 42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ.

ಪೌರ್ಣಿಮಾ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು, ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಕೊನೆಯುಸಿರೆಳೆದರು.

ಪೌರ್ಣಿಮಾ ವಿಶ್ವಕಪ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರು 10 ಮೀಟರ್ ಏರ್ ರೈಫಲ್‌ನಲ್ಲಿ ದೀರ್ಘಕಾಲದವರೆಗೆ ರಾಷ್ಟ್ರೀಯ ದಾಖಲೆ ಹೊಂದಿದ್ದರು. ಅವರ ಯಶಸ್ಸಿಗೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಶಿವ ಛತ್ರಪತಿ ಕ್ರೀಡಾ ಪ್ರಶಸ್ತಿಯನ್ನು ನೀಡಿತು.

ಪೌರ್ಣಿಮಾ ಭಾರತಕ್ಕಾಗಿ ಎಸ್‌ಎಎಫ್ ಗೇಮ್ಸ್, ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಚಾಂಪಿಯನ್‌ಶಿಪ್ ನಲ್ಲಿ ಪದಕಗಳನ್ನು ಗೆದ್ದಿದ್ದಾರೆ.

- Advertisement -

Latest News

error: Content is protected !!