- Advertisement -
- Advertisement -
ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದೆ ಎನ್ನುವ ವಿಚಾರ ವರದಿಯಾಗಿದೆ.
ಈ ಕುರಿತಂತೆ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದು, ಬೆದರಿಕೆ ಕರೆಯು ಇಂಟರ್ ನೆಟ್ ಮೂಲಕ ಬಂದಿದ್ದು, ಹಿಂದಿ, ಮರಾಠಿ, ಇಂಗ್ಲೀಷ್, ತುಳು ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆ ಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಕರೆಯ ಮೂಲಕ ಅನ್ವರ್ ಅವರಿಗೆ ನೀವು ಹೆಚ್ಚು ದಿನ ಉಳಿಯುವುದಿಲ್ಲ, ನಿನ್ನ ಸಮುದಾಯ ನಿನ್ನನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ದೂರಿನಲ್ಲಿ ತಿಳಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Advertisement -