Sunday, July 5, 2026
Homeತಾಜಾ ಸುದ್ದಿಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಂಡಿನ ದಾಳಿ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಂಡಿನ ದಾಳಿ

- Advertisement -
- Advertisement -

ವಾಷಿಂಗ್ಟನ್‌ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ.ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ಚುನಾವಣೆ ರ್ಯಾಲಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಮೇಲೆ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಟ್ರಂಪ್ ಅವರ ಕಿವಿಗೆ ಗಾಯವಾಗಿದೆ. ಕಿವಿ ಚರ್ಮಕ್ಕೆ ಗಾಯವಾಗಿದೆ.  ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು.ಇನ್ನು ಡೊನಾಲ್ಡ್ ಡ್ರಂಪ್ ಅವರಿಗೆ ಗಂಭೀರ ಗಾಯ ಆಗಿಲ್ಲ ಎನ್ನಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಡೊನಾಲ್ಡ್‌ ಟ್ರಂಪ್‌ ಮೇಲಿನ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದು, ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವಗಳಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮೃತರ ಕುಟುಂಬ, ಗಾಯಗೊಂಡವರು ಮತ್ತು ಅಮೆರಿಕದ ಜನರೊಂದಿಗೆ ಇವೆ ಎಂದು ಟ್ವೀಟ್‌ ಮಾಡಿದ್ದಾರೆ.

- Advertisement -

Latest News

error: Content is protected !!