Tuesday, June 9, 2026
Homeಕರಾವಳಿಬೆಳ್ತಂಗಡಿ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ!

ಬೆಳ್ತಂಗಡಿ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ!

- Advertisement -
- Advertisement -

ಬೆಳ್ತಂಗಡಿ: ತಾಲೂಕು ಪಂಚಾಯತ್ ಬಿಜೆಪಿ ಬೆಂಬಲಿತ ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಲಾಯಿಲ(47) ಇಂದು ಲಾಯಿಲ ಗ್ರಾಮದ ಆದರ್ಶನಗರದ ಸರ್ಕಾರಿ ಬಾವಿಯ ಕಟ್ಟೆಗೆ ರಿಕ್ಷಾವನ್ನು ಡಿಕ್ಕಿ ಹೊಡೆದು ನಂತರ ಅಲ್ಲಿಂದಲ್ಲೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಿಕ್ಷಾ ಚಾಲಕರಾಗಿ ದುಡಿಯುತಿದ್ದ ಇವರು ಕಳೆದ ಒಂದು ವರುಷ ಹಿಂದೆ ಬೆಳ್ತಂಗಡಿ ನಗರದ ಸಮೀಪ ನಡೆದ ಅಪಘಾತದಲ್ಲಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಾನಸಿಕವಾಗಿ ನೊಂದಿದ್ದರು. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇಂದು ಆದರ್ಶ ನಗರದ ಗೆಳೆಯನಿಗೆ ಆರೋಗ್ಯ ಸರಿಇಲ್ಲದ ಕಾರಣ ನೋಡಲು ಹಣ್ಣುಹಂಪಲು ತಂದು ವಿಚಾರಿಸಿ ವಾಪಸ್ ಹೋಗುವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳ್ತಂಗಡಿ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಸೇರಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!