Friday, June 5, 2026
Homeಕರಾವಳಿಮಂಗಳೂರುಮಂಗಳೂರು: ಬಾವುಟಗುಡ್ಡೆಯಲ್ಲಿ ದ.ಕ.‌‌ ಜಿಲ್ಲೆಯಲ್ಲಿ ಅತಿ ಎತ್ತರದ ಧ್ವಜ ಸ್ತಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ದ.ಕ.‌‌ ಜಿಲ್ಲೆಯಲ್ಲಿ ಅತಿ ಎತ್ತರದ ಧ್ವಜ ಸ್ತಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

- Advertisement -
- Advertisement -

ಮಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿದೆ.

ಬಾವುಟಗುಡ್ಡೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭ ನಿರ್ಮಾಣವಾಗಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಶಾಸಕ ವೇದವಾಸ್ ಕಾಮತ್ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮಹಾಪೌರ ಸುಧೀರ್ ಶೆಟ್ಟಿ ಕಣ್ಣೂರು, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು.

ಬಾವುಟಗುಡ್ಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರದ ಧ್ವಜ ಸ್ತಂಭವನ್ನು ನಿರ್ಮಾಣ ಮಾಡುವಂತೆ ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಮನವಿ ಸಲ್ಲಿಸಿದ್ದರು.

- Advertisement -

Latest News

error: Content is protected !!