- Advertisement -
- Advertisement -
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಹೆಗ್ಗಡೆ ನಗರದಲ್ಲಿ ಇಂದು ಹಜ್ ಯಾತ್ರಾರ್ಥಿಗಳನ್ನು ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಈ ಭರವಸೆ ನೀಡಿದ್ದಾರೆ.
ಹುಬ್ಬಳ್ಳಿ, ಮಂಗಳೂರು ಮತ್ತು ಕಲ್ಬುರ್ಗಿಯಲ್ಲಿ ಹಜ್ ಭವನ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಮತ್ತು ಕಲ್ಬುರ್ಗಿಗೆ ಹಣ ನೀಡಲಾಗಿದೆ ಎಂದು ಹೇಳಿರುವ ಸಿಎಂ, ಮಂಗಳೂರಿನಲ್ಲಿ ಈಗಾಗಲೇ ಹಜ್ ಭವನ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಗುದ್ದಲಿ ಪೂಜೆಗೆ ಚುನಾವಣಾ ಆಯೋಗ ಅನುಮತಿ ಕೊಡುವುದಿಲ್ಲ,
ಹಾಗಾಗಿ ನೀತಿ ಸಂಹಿತೆ ಮುಗಿದ ಮೇಲೆ ಮಂಗಳೂರು ಮತ್ತು ಕಲ್ಬಯರ್ಗಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- Advertisement -