Wednesday, June 24, 2026
Homeಕರಾವಳಿಶೀಘ್ರವೇ ನೂತನ ನ್ಯಾಯಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಭರವಸೆ

ಶೀಘ್ರವೇ ನೂತನ ನ್ಯಾಯಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಭರವಸೆ

- Advertisement -
- Advertisement -

ಬೆಳ್ತಂಗಡಿ: ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿ ಆರಂಭಕ್ಕೆ ಹಸಿರು ನಿಶಾನೆ ದೊರಕಿದ್ದು ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಆರ್ಥಿಕ ಬಿಡ್ ಗೆ ಸರಕಾರದಿಂದ ಅನುಮೋದನೆ ನೀಡಿದ್ದು ವಕೀಲರ ಸಂಘದ ಪದಾಧಿಕಾರಿಗಳ ಜೊತೆಗೂಡಿ ಶಂಕುಸ್ಥಾಪನೆ ನಡೆಸಲು ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ತಿಳಿಸಿದ್ದಾರೆ.

ದಿನಾಂಕ 19.05.2026 ರಂದು ಈ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ, ವಿಕಾಸ ಸೌಧ, ಬೆಂಗಳೂರು ಇವರು ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು (ಕೇಂದ್ರ), ಶಿವಮೊಗ್ಗ ಇವರಿಗೆ ಆದೇಶ ನೀಡಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!