Friday, June 5, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ನಾಳೆ ಸಿಎಂ ಶಿಲಾನ್ಯಾಸ

ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ನಾಳೆ ಸಿಎಂ ಶಿಲಾನ್ಯಾಸ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಉಡುಪಿಯ ಅಜ್ಜರಕಾಡಿನಲ್ಲಿ ಜಿಲ್ಲೆಯ 250 ಬೆಡ್ ಗಳ ಸರಕಾರಿ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಶಿಲಾನ್ಯಾಸ ಮಾಡಲಿದ್ದಾರೆ.

ಸಚಿವ ಸುನೀಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್ ಕೂಡಾ ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಮಧ್ಯಾಹ್ನ ಉಡುಪಿಗೆ ಭೇಟಿ ನೀಡಲಿರುವ ಸಿಎಂ ಸಂಜೆ ಸಭೆ ನಡೆಸಲಿದ್ದಾರೆ.

ಜಿಲ್ಲೆಯಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತದ ಜೊತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

- Advertisement -

Latest News

error: Content is protected !!