- Advertisement -
- Advertisement -
ಬಂಟ್ವಾಳ: ಕಾರಿಂಜ ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಪ್ರವೇಶಿಸಿದ್ದಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲದ ಬುಶೇರ್ ರೆಹಮಾನ್(20), ಇಸ್ಮಾಯಿಲ್ ಅರ್ಹ ಮಾಜ್ (22), ಮಹಮ್ಮದ್ ತಾನಿಶ್ (19), ಮೊಹಮ್ಮದ್ ರಶಾದ್(19) ಬಂಧಿತ ಆರೋಪಿಗಳು.
ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಅಂಗಣಕ್ಕೆ ಅನ್ಯ ಧರ್ಮದ ಯವಕರ ಗುಂಪು ಪ್ರವೇಶಿಸಿ ದೇವಸ್ಥಾನದ ಪಾವಿತ್ರ್ಯತೆಗೆ ದಕ್ಕೆ ತಂದುದಲ್ಲದೇ ದೇವಸ್ಥಾನದ ವಠಾರದಲ್ಲಿ ವಿಕೃತಿ ಮೆರೆದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಈ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
- Advertisement -