Wednesday, June 3, 2026
Homeಕರಾವಳಿಮಂಗಳೂರು: ನಿಷೇಧಿತ ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್

- Advertisement -
- Advertisement -

ಮಂಗಳೂರು: ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ಎಂಡಿಎಂಎ‌ ಸಾಗಾಟ ಮಾಡುತ್ತಿದ್ದ ಮಾಹಿತಿ ದೊರೆತಿದ್ದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ದೇರಳಕಟ್ಟೆ ಪ್ರದೇಶದಲ್ಲಿ ಎಂಡಿಎಂಎ ಮಾರಾಟದ ಬಗ್ಗೆ ಲಭ್ಯವಾಗಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ
ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೋಳಿಯಾರು ನಿವಾಸಿ ಮೊಹಮ್ಮದ್ ಸಫೀಲ್(23), ಬಂದರು ನಿವಾಸಿ ಮೊಹಮ್ಮದ್ ನೌಮಾನ್(22),
ಬಿಜೈ ನಿವಾಸಿ ಮೊಹಮ್ಮದ್ ಅಮೀನ್ ರಾಫಿ (23) ಮತ್ತು ಅಡ್ಡೂರು ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತ ಆರೋಪಿಗಳಿಂದ 6.5 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಮೊಬೈಲ್ ಫೋನ್ ಗಳು, ಕಾರು ಮತ್ತು ಡಿಜಿಟಲ್ ತೂಕ ಮಾಪಕವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!