Wednesday, September 9, 2026
Homeಕರಾವಳಿದ.ಕ. ಜಿಲ್ಲೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ವೃಂದದ ನಾಲ್ಕು ಅಧಿಕಾರಿಗಳ ವರ್ಗಾವಣೆ

ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ವೃಂದದ ನಾಲ್ಕು ಅಧಿಕಾರಿಗಳ ವರ್ಗಾವಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿ ವೃಂದದಲ್ಲಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ವಾಣಿಜ್ಯ ತೆರಿಗೆ ಅಧಿಕಾರಿ ಸಿ.ಎಸ್‌. ದಿನೇಶ ಅವರನ್ನು ಮೂಡಬಿದಿರೆ ಉಪ ಸರಕು ಮತ್ತು ಸೇವಾ ತೆರಿಗೆ ಕಚೇರಿಯಲ್ಲಿ ಖಾಲಿ ಇದ್ದ ವಾಣಿಜ್ಯ ತೆರಿಗೆ ಅಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮೂಡಬಿದಿರೆ ವಾಣಿಜ್ಯ ತೆರಿಗೆ ಅಧಿಕಾರಿ(ಲೆಕ್ಕಪರಿಶೋಧನೆ) ಯತೀಶ ಅವರನ್ನು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ(ಲೆಕ್ಕಪರಿಶೋಧನೆ) ಖಾಲಿ ಹುದ್ದೆಗೆ ವರ್ಗಾಯಿಸಲಾಗಿದೆ.

ದಾವಣಗೆರೆಯ ಸ್ಥಳೀಯ ಸರಕು ಮತ್ತು ಸೇವಾ ಕಚೇರಿಯ ವಾಣಿಜ್ಯ ತೆರಿಗೆ ಅಧಿಕಾರಿ ಉಮ ಆರ್. ಕಾಟೆ ಅವರನ್ನು ಮಂಗಳೂರು ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಚೇರಿಯ ವಾಣಿಜ್ಯ ತೆರಿಗೆ ಅಧಿಕಾರಿ(ಆಂತರಿಕ ಲೆಕ್ಕಪರಿಶೋಧನೆ ಮತ್ತು ತಪಾಸಣೆ-1)ಯಾಗಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಚೇರಿಯ ವಾಣಿಜ್ಯ ತೆರಿಗೆ ಅಧಿಕಾರಿ ಮಧು ಕೆ. ಆರಾಧ್ಯ ಅವರನ್ನು ಬೆಂಗಳೂರು ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಚೇರಿ-2 ರ ವಾಣಿಜ್ಯ ತೆರಿಗೆ ಅಧಿಕಾರಿ(ಆಂತರಿಕ ಲೆಕ್ಕಪರಿಶೋಧನೆ ಮತ್ತು ತಪಾಸಣೆ-2) ಆಗಿ ವರ್ಗಾವಣೆಗೊಳಿಸಲಾಗಿದೆ.

ಸಾರ್ವತ್ರಿಕ ವರ್ಗಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಅಧಿಕಾರಿ ವೃಂದದಲ್ಲಿ 68 ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

- Advertisement -

Latest News

error: Content is protected !!