Thursday, June 4, 2026
HomeUncategorizedಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ 4 ಕೋ.ರೂ. ಅನುದಾನ ಬಿಡುಗಡೆ

ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ 4 ಕೋ.ರೂ. ಅನುದಾನ ಬಿಡುಗಡೆ

- Advertisement -
- Advertisement -

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ನಾಲ್ಕು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ರೋಗ ನಿಯಂತ್ರಣಕ್ಕೆ ಒಟ್ಟು ಎಂಟು ಕೋಟಿ ರೂಪಾಯಿಗಳಷ್ಟು ಅನುದಾನ ನಿಗದಿಪಡಿಸಲಾಗಿದ್ದು, ನಾಲ್ಕು ಕೋಟಿ ರೂಪಾಯಿ ತಕ್ಷಣಕ್ಕೆ ರೈತರಿಗೆ ವಿತರಿಸಲು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಟ್ಟು ಇಪ್ಪತ್ತು ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದೆ.

ಪ್ರತಿ ಹೆಕ್ಟೇರ್ ಗೆ 4000 ರೂಪಾಯಿ ಅನುದಾನ ನೀಡಲಾಗುತ್ತಿದ್ದು, ಮೊದಲ ಸಿಂಪಡಣೆಗಾಗಿ 1.5 ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ ಅನುದಾನ ನಿಗದಿಪಡಿಸಲಾಗಿದೆ.

- Advertisement -

Latest News

error: Content is protected !!