Wednesday, June 3, 2026
Homeತಾಜಾ ಸುದ್ದಿಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿ; ರಾಜ್ಯದಲ್ಲಿ ಆ ನಾಲ್ಕು ದಿನ ಎಲ್ಲೂ ಸಿಗಲ್ಲ ಮದ್ಯ

ಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿ; ರಾಜ್ಯದಲ್ಲಿ ಆ ನಾಲ್ಕು ದಿನ ಎಲ್ಲೂ ಸಿಗಲ್ಲ ಮದ್ಯ

- Advertisement -
- Advertisement -

ಬೆಂಗಳೂರು : ಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ರಾಜ್ಯದಲ್ಲಿ ಆ ನಾಲ್ಕು ದಿನ ಎಲ್ಲೂ ಮದ್ಯ ಸಿಗಲ್ಲ. ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಮೇ 10 ರಂದು ಚುನಾವಣೆ ನಡೆಯಲಿದೆ. ವಿಧಾನಸಭೆ ಚುನಾವಣೆ ಹಾಗೂ ಮತ ಎಣಿಕೆ ನಡೆಯುವ ಈ ಹಿನ್ನೆಲೆ ನಾಲ್ಕು ದಿನ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಮೇ 8,9,10 ಮತ್ತು 13 ರಂದು ರಾಜ್ಯದಲ್ಲಿ ಒಟ್ಟು ನಾಲ್ಕು ದಿನಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಸಂಜೀವ್ ಕುಮಾರ್ ಪ್ರಸಾದ್, ಮುಖ್ಯ ಕಾರ್ಯದರ್ಶಿ ಪತ್ರದ ಮೂಲಕ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ.ಕರ್ನಾಟಕದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಮೇ. 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

- Advertisement -

Latest News

error: Content is protected !!