Saturday, May 18, 2024
Homeಕರಾವಳಿಉಡುಪಿಉಡುಪಿ: ಜಿಲ್ಲೆಯಾದ್ಯಂತ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ

spot_img
- Advertisement -
- Advertisement -

ಉಡುಪಿ : ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ ಕರಾವಳಿ ತೀರದುದ್ದಕ್ಕೂ ಗಂಟೆಗೆ 40ರಿಂದ 50ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಪಶ್ಚಿಮದ ಅರಬಿಸಮುದ್ರದಲ್ಲಿ ಮೂರರಿಂದ 3.2ಮೀ. ಎತ್ತರದ ಅಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೀಗಾಗಿ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿ ತೀರದ ಮೀನುಗಾರರು ಜೂ.25ರ ಮಧ್ಯರಾತ್ರಿಯವರೆಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಇದರೊಂದಿಗೆ ಮುಂದಿನ ಐದು ದಿನಗಳ ಕಾಲ ಜಿಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, 115.6 ಮಿ.ಮೀ.ನಿಂದ 204.4ಮಿ.ಮೀ.ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!