Friday, May 3, 2024
Homeಕೊಡಗುಕೊಡಗು ಜಿಲ್ಲೆಯಲ್ಲಿ ನಾಳೆಯಿಂದ 4 ದಿನಗಳ ಕಾಲ ನಿಷೇಧಾಜ್ಞೆ

ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ 4 ದಿನಗಳ ಕಾಲ ನಿಷೇಧಾಜ್ಞೆ

spot_img
- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ನಾಳೆಯಿಂದ ನಾಲ್ಕು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆಗಸ್ಟ್ 26ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ನಾಳೆ ಬೆಳಗ್ಗೆ 6 ರಿಂದ ಆಗಸ್ಟ್ 27ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಕೊಡಗು ಡಿಸಿ ಡಾ.ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದಿಂದ ನಿಷೇಧಾಜ್ಞೆ ವಿಧಿಸಲಾಗಿದೆ.

ನಿಷೇಧಾಜ್ಞೆ ಜಾರಿಯಲ್ಲಿರುವ 4 ದಿನಗಳ ಕಾಲ ಯಾವುದೇ ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನೆ ಹಾಗೂ ಯಾವುದೇ ರ್ಯಾಲಿ ನಡೆಸುವಂತಿಲ್ಲ.

ಅಲ್ಲದೇ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.

- Advertisement -
spot_img

Latest News

error: Content is protected !!