Sunday, June 7, 2026
Homeತಾಜಾ ಸುದ್ದಿಅಂತ್ಯಕ್ರಿಯೆ ಮುಗಿಸಿ ವಾಪಸ್​ ಬರ್ತಿದ್ದಾಗ ಭೀಕರ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಅಂತ್ಯಕ್ರಿಯೆ ಮುಗಿಸಿ ವಾಪಸ್​ ಬರ್ತಿದ್ದಾಗ ಭೀಕರ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

- Advertisement -
- Advertisement -

ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಲಿಂಗಸಗೂರು ತಾಲ್ಲೂಕಿನ ದೇವರಬೂಪುರು ಗ್ರಾಮದ ನಿವಾಸಿಗಳೆಂದು ಹೇಳಲಾಗಿದ್ದು ಅಂತ್ಯಸಂಸ್ಕಾರಕ್ಕೆ ಹೋಗಿಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕಾಗಮಿಸಿದ ದೇವದುರ್ಗ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಾಲಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -

Latest News

error: Content is protected !!