Thursday, June 11, 2026
Homeತಾಜಾ ಸುದ್ದಿಕರ್ನಾಟಕದಿಂದ ರಾಜ್ಯಸಭೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಕರ್ನಾಟಕದಿಂದ ರಾಜ್ಯಸಭೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

- Advertisement -
- Advertisement -

ಬೆಂಗಳೂರು: ರಾಜ್ಯಸಭೆ ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು.

ನಾಲ್ಕು ಸ್ಥಾನಗಳಿಗೆ ನಿಗದಿಯಾಗಿದ್ದ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳು ಮಾತ್ರ ಕಣದಲ್ಲಿ ಉಳಿದಿದ್ದರು. ಹೀಗಾಗಿ ನಾಲ್ವರು ಅಭ್ಯರ್ಥಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ರಾಷ್ಟ್ರೀಯ ವಕ್ತಾರ ಪವನ್ ಖೇರಾ, ಮಾಜಿ ರಾಜ್ಯಸಭಾ ಉಪಸಭಾಪತಿ ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್ ಮತ್ತು ಪ್ರೊ. ಎಂ.‌ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಮೂರು ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಒಂದು ಸ್ಥಾನವನ್ನು ಬಿಜೆಪಿ ಗೆದ್ದಿದ್ದು, ಪವನ್ ಖೇರಾ, ಮನ್ಸೂರ್ ಖಾನ್ ಮತ್ತು ಪ್ರೊ. ನಾಗರಾಜ್ ಇಂದು ಚುನಾವಣಾಧಿಕಾರಿಯಿಂದ ಆಯ್ಕೆಯ ಪ್ರಮಾಣಪತ್ರ ಸ್ವೀಕರಿಸಿದರು.

- Advertisement -

Latest News

error: Content is protected !!