Friday, April 19, 2024
Homeಕರಾವಳಿರಾಜ್ಯದಲ್ಲಿ ಕೊರೋನಾ ಪ್ರಕರಣದಲ್ಲಿ ಏರಿಕೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 4 ಪ್ರಕರಣ

ರಾಜ್ಯದಲ್ಲಿ ಕೊರೋನಾ ಪ್ರಕರಣದಲ್ಲಿ ಏರಿಕೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 4 ಪ್ರಕರಣ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 241 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ನಿನ್ನೆ ಶೂನ್ಯ ಪ್ರಕರಣ ದಾಖಲಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಮತ್ತೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 5 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 19 ಸಕ್ರೀಯ ಪ್ರಕರಣಗಳಿವೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಎರಡು ಸಕ್ರೀಯ ಪ್ರಕರಣಗಳು ಇವೆ.

ರಾಜ್ಯದಲ್ಲಿ ದಾಖಲಾಗಿರುವ 241 ಹೊಸ ಪ್ರಕರಣಗಳ ಪೈಕಿ 232, ತುಮಕೂರು ಜಿಲ್ಲೆಯಲ್ಲಿ 3 ಮತ್ತು ಬೆಳಗಾವಿ ಜಿಲ್ಲೆಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ಇಂದು ರಾಜ್ಯದಲ್ಲಿ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಕೊರೋನಾ ಪ್ರಕರಣಗಳು ಕಂಡುಬಂದಿದ್ದು, ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ.

- Advertisement -
spot_img

Latest News

error: Content is protected !!